ನೇಹಾ ಹಿರೇಮಠ ಹತ್ಯೆ ಪ್ರಕರಣ: ರಾಜ್ಯ ಸರಕಾರದಿಂದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲಿ ಕೊಲೆ ಮಾಡಿದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಕುರಿತಂತೆ ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಈ ಕುಮಾರಿ ನೇಹಾ ಹೀನಾಯ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ್ದಾರೆ.

ಈ ವೇಳೆ ಸರ್ಕಾರದಿಂದ ವಿಶೇಷ ನ್ಯಾಯಾಲಯವನ್ನು ಸ್ಥಾಪನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಕೂಡಲೇ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಆದೇಶ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!