ನೇಹಾ ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ ಹಿನ್ನಲೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರು ದಿನಗಳ ಕಾಲ ವಿಚಾರಣೆಗೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಇಂದು(ಏ.30) ಮರಳಿ‌ ನ್ಯಾಯಾಲಯಕ್ಕೆ ಹಾಜರು ಪಡಿಸಿ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಎಂಬಾತ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿದ್ದನು. ಇದಾದ ಬಳಿಕ ಒಂದು ಗಂಟೆಯಲ್ಲಿಯೇ ಆತನನ್ನ ಬಂಧಿಸಲಾಗಿತ್ತು.

ನಂತರ ಹುಬ್ಬಳ್ಳಿಯ ಒಂದನೇ JMFC ಕೋರ್ಟ್, ಫಯಾಜ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿತ್ತು. ಈ ಮದ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನಲೆ ಫಯಾಜ್​​ನನ್ನ ಆರು ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ವಿವಿಧ ಆಯಾಮಗಳಲ್ಲಿ ಫಯಾಜ್ ವಿಚಾರಣೆ ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!