ನೇಹಾ ಹತ್ಯೆ ಪ್ರಕರಣ: ಆರೋಪಿ ಬಂಧಿಸಿದ ಪೊಲೀಸ್ ತಂಡಕ್ಕೆ ‘ಕಾಪ್ ಆಫ್ ದಿ ಮಂತ್’ ಅವಾರ್ಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath) ಎಂಬ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿದ ಪೊಲೀಸರಿಗೆ ‘ಕಾಪ್‌ ಆಫ್‌ ದಿ ಮಂತ್‌’ ಅವಾರ್ಡ್‌ (Cop Of The Month Award) ನೀಡಿ ಪ್ರಶಂಸಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಈ ಪ್ರಕರಣದ ಆರೋಪಿ ಪತ್ತೆ ಹಚ್ಚಲು ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಕೆ ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯ ಸಾಧಿಸಿ, ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಫಯಾಜ್ ಬಾಬಾಸಾಹೇಬ ಖೊಂದುನಾಯಕ (23) ಬೆನ್ನತ್ತಿದ್ದರು. ಈತನ ಸುಳಿವನ್ನು ಬೆನ್ನತ್ತಿ ಕೃತ್ಯ ನಡೆದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ. ಅಲ್ಲದೇ, ಉತ್ತರ ಉಪವಿಭಾಗದ ಎಸಿಪಿ ಮತ್ತು ವಿದ್ಯಾನಗರ ಪಿಎಸ್‌ನ ಪಿಐ ಅವರ ನೇತೃತ್ವದ ತಂಡಕ್ಕೆ ‘ಕಾಪ್ ಆಫ್ ದಿ ಮಂತ್’ ಎಂದು ಘೋಷಿಸಿ, 25 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ವಿತರಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!