ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹೊಸದಿಗಂತ ವರದಿ,ಮಂಡ್ಯ :

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಎಂಬ ಯುವತಿಯನ್ನ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಎಬಿವಿಪಿ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲವ್ ಜಿಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ವಿರುದ್ಧ ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!