ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳ ಜೀವಕ್ಕೆ ಬೆಲೆ ಇಲ್ಲವಾಗಿದೆ. ಮತಾಂಧರಿಗೆ ಕುಮ್ಮಕ್ಕು ಸಿಗುತ್ತಿದೆ. ಇವರು ಏನೇ ಮಾಡಿದರೂ ನೆರವು ನೀಡಲು ಕಾಂಗ್ರೆಸ್ ಸಿದ್ಧ ಇದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಆರೋಪ ಮಾಡಿದ್ದಾರೆ.
ಆರ್ ಅಶೋಕ್ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿಯ ಬಿದರಗುಪ್ಪೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲಿಬಾನ್ ಸರ್ಕಾರದ ಉಪಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜೈ ಶ್ರೀರಾಮ್ ಎಂದರೆ ಬಡಿದು ಹಾಕ್ತಾರೆ. ಹನುಮಾನ್ ಚಾಲೀಸ ಹಾಕಿದರೆ ಹಲ್ಲೆ ಮಾಡುತ್ತಾರೆ. ಆದರೆ, ಪಾಕಿಸ್ತಾನ್ ಜಿಂದಾಬಾದ್ ಅಂದ್ರೆ ಬಿರಿಯಾನಿ ಕೊಡ್ತಾರೆ. ಜೊತೆಗೆ ವಿಧಾನಸೌಧಕ್ಕೂ ಪಾಸ್ ಕೊಡ್ತಾರೆ ಎಂದು ಕಿಡಿ ಕಾರಿದ್ದಾರೆ.
ನೇಹಾ ಹತ್ಯೆಯನ್ನು ಪ್ರೇಮಿಗಳ ಜಗಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜಿ ಪರಮೇಶ್ವರ್ ಒಂದು ಹೆಜ್ಜೆ ಮುಂದೆ ಹೋಗಿ ದಾಖಲೆ ಬಿಡುಗಡೆ ಮಾಡುತ್ತಾರೆ. ಮಾರನೆ ದಿನ ತಮ್ಮ ಹೇಳಿಕೆಯಿಂದ ಬೇಸರ ಆಗಿದ್ದರೆ ಕ್ಷಮಿಸಿ ಅನ್ನುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹುಬ್ಬಳ್ಳಿ ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಆರ್ ಅಶೋಕ್ ಆಗ್ರಹ ಮಾಡಿದ್ದಾರೆ.