ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಒಂದು ವಾರದೊಳಗೆ ನ್ಯಾಯಾಲಯದಲ್ಲಿ ದೋಷಾರೋಪಣೆಯನ್ನು ರಚಿಸಲಾಗುವುದು ಎಂದು ತಿಳಿದುಬಂದಿದೆ. ಮಾರ್ಚ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾಳನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.
ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ನೇಹಾಳನ್ನು ಕೊಲ್ಲಲಾಗಿತ್ತು. ಘಟನೆಯ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು. ಫಯಾಜ್ ಪೋಷಕರ ವಿಚಾರಣೆ ನಡೆಸಿದ ಎಸ್ ಐಟಿ ಇದೀಗ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ.
Intha ha vikruta manisinavaranna yenukadru ulsikondiddara en counter madabeku