ನೇಹಾ ಹತ್ಯೆ ಪ್ರಕರಣ: ನಾಳೆ ರಾಜ್ಯಾದ್ಯಂತ ಬೃಹತ್​ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಹಾ (Neha murder case) ಹತ್ಯೆ ಪ್ರಕರಣ ನಾನಾ ತಿರುವು ಪಡೆದುಕೊಳ್ಳುತ್ತಿದ್ದು, ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮಧ್ಯೆ ನೇಹಾ ಹಿರೇಮಠ್​​ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಮಿತಿಮೀರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಕಾನೂನು ಸುವ್ಯವಸ್ಥೆ ಖಂಡಿಸಿ ಏ. 22 ರಂದು ರಾಜ್ಯಾದ್ಯಂತ ಬೃಹತ್​ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ.

 

ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!