ನೇಹಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನೇಹಾ ಹಿರೇಮಠ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ಒತ್ತಾಯಿಸಿದರು.

ಇಂದು(ಮಂಗಳವಾರ) ಹುಬ್ಬಳ್ಳಿ ನಗರದ ಬಿಡನಾಳದಲ್ಲಿರುವ ನೇಹಾನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳನ್ನು ಗಮನಿಸಿದರೆ, ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ನೇಹಾ ಕೊಲೆ‌ ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ನೇಹಾ ಅವರ ತಂದೆ ನಿರಂಜನಯ್ಯ ಅವರೇ ಹೇಳುತ್ತಿದ್ದಾರೆ. ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಸಿಐಡಿ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸಿಲ್ಲ. ಇದನ್ನೆಲ್ಲ ಗಮನಿಸಿದರೆ ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಅನುಮಾನ ಹುಟ್ಟಿದೆ. ಯಾರು ಕೂಡ ಈ ಪ್ರಕರಣವನ್ನು ಜಾತಿ, ಧರ್ಮಕ್ಕೆ ಬಳಸಿಕೊಳ್ಳಬಾರದು. ನೊಂದ ಹೆತ್ತರಿಗೆ ಸಮಾಧಾನವಾಗುವ ರೀತಿಯಲ್ಲಿ ವರ್ತಿಸಬೇಕು ಎಂದು ತಿಳಿಸಿದ್ದಾರೆ.

ನಾವು ಇಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಆದರೆ ದುರದೃಷ್ಟವಶಾತ್, ಇದರಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ಯಾರನ್ನೂ ತನಿಖೆಗೆ ಕರೆದಿಲ್ಲ ಎಂದು ಹೇಳಿದರು.

ಸರ್ಕಾರ ಪ್ರಕರಣವನ್ನು ಗಂಭೀರವಾಗಿದುಕೊಂಡಿಲ್ಲ. ತನಿಖೆಯಲ್ಲಿ ಯಾವ ಪ್ರಗತಿಯೂ ಕಂಡಿಲ್ಲ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸವಾಲು ಎದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ತಕ್ಷಣ ಸಿಐಡಿಯಿಂದ ಸಿಬಿಐ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!