ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರಮುಖ ರಸ್ತೆಯಾದ ನೆಲಮಂಗಲ-ಯಶವಂತಪುರ ರಸ್ತೆಗೆ ನಟಿ ಲೀಲಾವತಿ ಅವರ ಹೆಸರನ್ನು ಇಡಬೇಕು ಎನ್ನುವ ಕೂಗು ಎಲ್ಲೆಡೆ ಕೇಳಿಬರುತ್ತಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಗೌರವ ಸಲ್ಲಿಸಲು ರಸ್ತೆಗೆ ಹೆಸರಿಡಬೇಕು ಎಂದು ಬಿಬಿಎಂಪಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಪಾಲಿಕ ಮುಖ್ಯ ಆಯುಕ್ತರಿಗೆ ಮನವಿ ಪತ್ರ ನೀಡಿದೆ.