ರಾಜ್ಯದಲ್ಲಿ ವೋಟ್ ಬ್ಯಾಂಕ್‌ಗೋಸ್ಕರ​ ಎನ್​ಇಪಿ ರದ್ದು ಮಾಡಲಾಗಿದೆ: ‘ಕೈ’ ವಿರುದ್ಧ ಮೋದಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರು ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಆದರೆ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಬ್ಯಾಂಕ್‌ಗೋಸ್ಕರ ಎನ್‌ಇಪಿ ನಿರ್ಮೂಲನೆಯಾಗಿದೆ.

ಕಾಂಗ್ರೆಸ್ ಮಕ್ಕಳ ಭವಿಷ್ಯವನ್ನು ನಾಶ ಮಾಡಿದೆ. ರಾಜಕೀಯದಲ್ಲಿ ತೊಡಗಿಸಿಕೊಳ್ಳಿ, ಆದರೆ ಜನರ ಭವಿಷ್ಯದ ಜೊತೆ ಆಟವಾಡಬೇಡಿ. ದೇಶದಲ್ಲಿ ಕಾಂಗ್ರೆಸ್ ಕೋಟ್ಯಾಂತರ ರೂ. ಅವ್ಯವಹಾರ ನಡೆಸಿದೆ. ಬಡವರ ಯೋಜನೆಗಳೆಂದರೆ ಕಾಂಗ್ರೆಸ್​ಗೆ ಹಣ ಗಳಿಸುವ ಯೋಜನೆಗಳು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಆಡಳಿತದಲ್ಲಿ ಜನರ ಭದ್ರತೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಮೋದಿ, ಮನೆಯಿಂದ ಹೊರಹೋದವರು ರಾತ್ರಿಯಲ್ಲಿ ಸುರಕ್ಷಿತವಾಗಿ ಮನೆಗೆ ಮರಳುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!