ಇದೇ ತಿಂಗಳಲ್ಲಿ ಪ್ರಾಥಮಿಕ ಶಿಕ್ಷಣದಲ್ಲೂ ಎನ್ಇಪಿ ಜಾರಿ: ಸಚಿವ ನಾಗೇಶ್

ಹೊಸದಿಗಂತ ವರದಿ,ಶಿವಮೊಗ್ಗ:

ಇದೇ ತಿಂಗಳಿನಿಂದಲೇ ಆಯ್ದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನವರಿ 26ರಿಂದ ಪ್ರಾಯೋಗಿಕವಾಗಿ ಸುಮಾರು 300 ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ. ಇದರ ಸಾಧಕ-ಬಾಧಕ ಪರಿಶೀಲಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಪೂರ್ಣವಾಗಿ ಹೊಸ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಯೋಚಿಸಲಾಗುವುದು ಎಂದರು.

ಪ್ರಾಯೋಗಿಕವಾಗಿ ಜಾರಿಗೆ ಬಂದ ಬಳಿಕ ಅದರ ಬಗ್ಗೆ ಸಾರ್ವಜನಿಕವಾಗಿ, ಶಿಕ್ಷಣ ವಲಯದಲ್ಲಿ ಚರ್ಚೆ ನಡೆಯಲಿದೆ. ಇದರಿಂದ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಕಾಲಾವಕಾಶ ಸಿಗಲಿದೆ ಈಗಾಗಲೇ ಪಠ್ಯ ಸಿದ್ಧವಾಗಿದೆ. ಚಟುವಟಿಕೆ ಆಧಾರಿತ ಶಿಕ್ಷಣ ಇದಾಗಿರುವುದರಿಂದ ಹೆಚ್ಚಿನ ಪಠ್ಯ ರಚನೆ ಅಗತ್ಯವಿಲ್ಲ. ಇದರಿಂದ ಮಕ್ಕಳಿಗೆ ಪಠ್ಯ ಪುಸ್ತಕಗಳ ಹೊರೆಯೂ ತಗ್ಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!