ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಆರೋಪದಲ್ಲಿ ಜೈಲು ಪಾಲಾಗಿದ್ದ ನೇಪಾಳ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಸಂದೀಪ್ ಲಮಿಚಾನೆ ಅನ್ನು ನೇಪಾಳದ ಪಟೇನ್ ಹೈಕೋರ್ಟ್ ನಿರಪರಾಧಿ ಎಂದು ಘೋಷಿಸಿದೆ.
ಯುವ ಕ್ರಿಕೆಟಿಗನಿಗೆ ಲೈಂಗಿಕ ದೌರ್ಜನ್ಯದ ಆರೋಪದಡಿಯಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಹೈಕೋರ್ಟ್ ಮೆಟ್ಟಿಲ್ಲೇರಿದ್ದ ಸಂದೀಪ್ ಲಮಿಚಾನೆ ಇದೀಗ ದೋಷಮುಕ್ತರಾಗಿದ್ದಾರೆ.
ನ್ಯಾಯಾಲಯವು ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನ ಹಿಂದಿನ ತೀರ್ಪನ್ನು ರದ್ದುಗೊಳಿಸಿದೆ. ಅಲ್ಲದೆ ಹೈಕೋರ್ಟ್ ನ್ಯಾಯಾಧೀಶರಾದ ಸುದರ್ಶನ್ ದೇವ್ ಭಟ್ಟ ಮತ್ತು ಅಂಜು ಉಪೇತ್ರಿ ಅವರು ಲಮಿಚಾನೆ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ್ದಾರೆ. ಇದರೊಂದಿಗೆ ಸಂದೀಪ್ ಲಮಿಚಾನೆ ಅತ್ಯಾಚಾರದ ಆರೋಪದಿಂದ ಬಂಧಮುಕ್ತರಾಗಿದ್ದಾರೆ.
ಏನಿದು ಪ್ರಕರಣ?
2022ರ ಸೆಪ್ಟೆಂಬರ್ 7 ರಂದು ನೇಪಾಳ ತಂಡದ ನಾಯಕರಾಗಿದ್ದ ಸಂದೀಪ್ ಲಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ 17 ವರ್ಷ ವಯಸ್ಸಿನ ಯುವತಿ ಕಠ್ಮಂಡು ಪೊಲೀಸರಿಗೆ ದೂರು ನೀಡಿದ್ದರು.