ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರೋಲ್ಪಾ ಜಿಲ್ಲೆಯ ಗುಡ್ಡಗಾಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಜೀಪ್ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 20 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಮಳೆ ಮತ್ತು ಕೆಸರಿನಿಂದ ತುಂಬಿದ ರಸ್ತೆ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ:
ಗುರುವಾರ ಜಲ್ಜಲಾ ಪ್ರದೇಶದ ಮೂಲಕ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಜೀಪ್ ಸುಮಾರು 700 ಮೀಟರ್ ಆಳದ ಪ್ರಪಾತಕ್ಕೆ ಬಿದ್ದಿದೆ. ಬೈಸಖ್ ಪೂರ್ಣಿಮಾ ಆಚರಣೆಯಲ್ಲಿ ಭಾಗವಹಿಸಲು ಸ್ಥಳೀಯರು ಈ ವಾಹನವನ್ನು ಬಾಡಿಗೆಗೆ ಪಡೆದು ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಾರ್ಧದಲ್ಲಿ ಸಂಭವಿಸಿದ ಈ ದುರಂತ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಇದೇ ವೇಳೆ ಭಾರೀ ಮಳೆಯ ಅಬ್ಬರ ರಕ್ಷಣಾ ಕಾರ್ಯಾಚರಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಂದಕ ಪ್ರದೇಶ ದುರ್ಗಮವಾಗಿರುವುದರಿಂದ ಸಹಾಯಕ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ವಾಹನದಲ್ಲಿ ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



