ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿಯ ಹಲವು ಪ್ರದೇಶಗಳಲ್ಲಿ ಸ್ವಿಗ್ಗಿ, ಝೊಮ್ಯಾಟೋ ಸೇರಿ ಹಲವು ಕಂಪನಿಗಳ ಫುಡ್ ಡೆಲಿವರಿ ಬಾಯ್ಸ್‌ನ್ನು ಗುರಿಯಾಗಿಸಿಕೊಂಡು ರಾಬರಿ ನಡೆಸುತ್ತಿದ್ದ ನೇಪಾಳಿ ಮೂಲದ ನಾಲ್ವರ ಗ್ಯಾಂಗ್ ಅನ್ನು ಬೆಳ್ಳಂದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಬಂಧನದಿಂದ ಬೆಳ್ಳಂದೂರು ಸೇರಿದಂತೆ ನಗರದ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಗಳು ಬೆಳಕಿಗೆ ಬಂದಿವೆ.
ಬಂಧಿತ ಆರೋಪಿಗಳನ್ನು ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20) ಮತ್ತು ಸಮೀರ್ ಲೋಹಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನೇಪಾಳದಿಂದ ಬೆಂಗಳೂರಿಗೆ ಬಂದು ಇಲ್ಲಿನ ವಿವಿಧ ಪ್ರದೇಶಗಳಲ್ಲಿ ಸೆಕ್ಯುರಿಟಿ ಗಾರ್ಡ್ ಮತ್ತು ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಇದರ ಜೊತೆಗೆ, ಸುಲಭವಾಗಿ ಹಣ ಗಳಿಸುವ ದುರಾಸೆಯಿಂದ, ಸಮಯ ಸಿಕ್ಕಾಗಲೆಲ್ಲಾ ಫುಡ್ ಡೆಲಿವರಿ ಬಾಯ್‌ಗಳನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುತ್ತಿದ್ದರು.
ಸ್ವಿಗ್ಗಿ, ಜೊಮ್ಯಾಟೋ ಫುಡ್ ಡೆಲಿವರಿ ಬಾಯ್‌ಗಳ ರಾಬರಿ ಮಾಡ್ತಿದ್ದ ನೇಪಾಳಿ ಗ್ಯಾಂಗ್ ಅರೆಸ್ಟ್

