ಹೊಸದಿಗಂತ ಡಿಜಿಟಲ್ ಡೆಸ್ಕ್:
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇರ ನೇಮಕಾತಿಗೆ ಅರ್ಹತಾ ಮಾನದಂಡಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಪರಿಷ್ಕರಿಸಿದೆ.
ಈ ಮುಂಚೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಪಿಎಚ್‌ಡಿ ಪದವಿ ಪರಿಗಣಿಸಲಾಗುತ್ತಿತ್ತು. ಆದರೆ ಇದೀಗ ಯುಜಿಸಿ ಅರ್ಹತಾ ಮಾನದಂಡವನ್ನು ಪರಿಷ್ಕರಿಸಿದ್ದು, ಎನ್ಇಟಿ, ಎಸ್ಇಟಿ ಅಥವಾ ಎಸ್ಎಲ್ಇಟಿ ಅನ್ನು ಅರ್ಹತಾ ಮಾನದಂಡವಾಗಿ ಕಡ್ಡಾಯಗೊಳಿಸಿದೆ.
ಜುಲೈ 1, 2023 ರಿಂದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇರ ನೇಮಕಾತಿಗೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ ಜೊತೆಗೆ NET, SET ಅಥವಾ SLET ವಿದ್ಯಾರ್ಹತೆಯಾಗಿದೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.