ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ನಲ್ಲಿ ಮತ್ತೆ ಹೌತಿ ಬಂಡುಕೋರರ ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ರೊಚ್ಚಿಗೆದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಪ್ರತೀಕಾರದ ಶಪಥ ಮಾಡಿದ್ದಾರೆ.
ಯೆಮೆನ್‌ನ ಹೌತಿ ಬಂಡುಕೋರರು ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆಸಿದ ನಂತರ, ಪ್ರಧಾನಿ ನೆತನ್ಯಾಹು ಈ ದಾಳಿಯು ದೊಡ್ಡ ಪ್ರತೀಕಾರಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಒಮ್ಮೆ ಮಾತ್ರ ಅಲ್ಲ, ನಿರಂತರ ದಾಳಿಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.
ಬೆನ್ ಗುರಿಯನ್ ವಿಮಾನ ನಿಲ್ದಾಣದ ಬಳಿ ನಡೆದ ಕ್ಷಿಪಣಿ ದಾಳಿಯಲ್ಲಿ ಎಂಟು ನಾಗರಿಕರು ಗಾಯಗೊಂಡು, ಕೆಲ ಸಮಯದ ಕಾಲ ಇಡೀ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಆಗಿತ್ತು.
ಪ್ರಧಾನಿ ಬೆಂಜಮಿನ್ ನೆತನ್ಯಾಹು ತೀವ್ರವಾಗಿ ಪ್ರತಿಕ್ರಿಯಿಸಿ, ದಾಳಿಯಲ್ಲಿ ಕ್ಷಿಪಣಿ ಇಸ್ರೇಲ್‌ನ ಪ್ರಮುಖ ವಿಮಾನ ನಿಲ್ದಾಣವಾದ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಿದ್ದಿತು.ಈ ಪ್ರತೀಕಾರ ಒಮ್ಮೆಗೇ ಕೊನೆಗೊಳ್ಳುವುದಿಲ್ಲ. ನಾವು ನಿರಂತರವಾಗಿ ದಾಳಿ ಮಾಡುತ್ತೇವೆ ಮತ್ತು ಅದನ್ನು ಮುಂದುವರಿಸುತ್ತೇವೆ ಎಂದು ನೇತನ್ಯಾಹು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಿಂದ ಬಿಡುಗಡೆಯಾದ ವೀಡಿಯೊದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.