Sunday, December 3, 2023

Latest Posts

ವಾರ್ನರ್- ಮ್ಯಾಕ್ಸ್‌ವೆಲ್ ಅಬ್ಬರಕ್ಕೆ ನಲುಗಿದ ನೆದರ್‌ಲೆಂಡ್ಸ್‌: ಗೆಲುವಿಗೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡೇವಿಡ್ ವಾರ್ನರ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಬಾರಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 399 ರನ್ ಬಾರಿಸಿದ್ದು, ನೆದರ್‌ಲೆಂಡ್ಸ್‌ಗೆ ಕಠಿಣ ಗುರಿ ನೀಡಿದೆ.

ಅರುಣ್‌ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು ಆರಂಭದಲ್ಲೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜೋಡಿ 118 ಎಸೆತದಲ್ಲಿ 132 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಮಿತ್ 68 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 71 ರನ್ ಬಾರಿಸಿ ಆರ್ಯನ್ ದತ್‌ಗೆ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ಮೂರನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಬುಶೇನ್‌ 84 ರನ್‌ಗಳ ಜತೆಯಾಟ ನಿಭಾಯಿಸಿದರು. ಲಬುಶೇನ್‌ 47 ಎಸೆತಗಳನ್ನು ಎದುರಿಸಿ 62 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಡೇವಿಡ್ ವಾರ್ನರ್ 93 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 104 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ವಾರ್ನರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 6ನೇ ಶತಕ ಬಾರಿಸಿ, ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ 5 ಶತಕಗಳ ದಾಖಲೆಯನ್ನು ಬ್ರೇಕ್ ಮಾಡಿದರು.

ನೆದರ್‌ಲೆಂಡ್ಸ್ ಎದುರು ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಮ್ಯಾಕ್ಸ್‌ವೆಲ್ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದರು. ಈ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತಿವೇಗವಾಗಿ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಮ್ಯಾಕ್ಸ್‌ವೆಲ್ ಪಾತ್ರರಾದರು. ಮ್ಯಾಕ್ಸ್‌ವೆಲ್ 44 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!