SHOCKING VIDEO| ರೈಲಿನ ಫುಟ್ ಬೋರ್ಡ್ ಮೇಲೆ ನೇತಾಡುತ್ತಾ ವೃದ್ಧೆಯ ಪ್ರಯಾಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈನ ಸ್ಥಳೀಯ ರೈಲುಗಳು ಜನದಟ್ಟಣೆಯಿಂದ ಕೂಡಿರುತ್ತವೆ. ಜನ ತಮ್ಮ ದೈನಂದಿನ ಅಗತ್ಯಗಳಿಗಾಗಿ ಪ್ರತಿದಿನ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಆಗಾಗ್ಗೆ ಕಂಡುಬರುತ್ತವೆ.

ಇದೀಗ ಮುಂಬೈ ಲೋಕಲ್ ರೈಲಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರೈಲು ತುಂಬಾ ವೇಗವಾಗಿ ಹೋಗುತ್ತಿದ್ದು, ಅದರಲ್ಲಿ ಒಬ್ಬ ಅಜ್ಜಿ ಫುಟ್ ಬೋರ್ಡ್ ಮೇಲೆ ನೇತಾಡುತ್ತಾ ಪ್ರಯಾಣಿಸುತ್ತಿರುವ ಭಯಾನಕ ದೃಶ್ಯ ಕಂಡುಬಂದಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ನೆಟ್‌ನಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ವಿಡಿಯೋವನ್ನು ಶೇರ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಒಂದು ಕಡೆ ದೇಶದಲ್ಲಿ ಬುಲೆಟ್ ರೈಲು ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಸಾಮಾನ್ಯ ರೈಲುಗಳ ದುಸ್ಥಿತಿ ಬಗ್ಗೆ ದೂರುತ್ತಿದ್ದಾರೆ. ದೇಶದಲ್ಲಿ ಮೊದಲ ರೈಲು ಆರಂಭವಾಗಿ 160 ವರ್ಷಗಳಾಗಿವೆ. ಸರ್ಕಾರ ವಂದೇ ಭಾರತ್‌ನಂತಹ ರೈಲುಗಳನ್ನು ತರುತ್ತಿದೆ. ಈಗಿರುವ ರೈಲುಗಳಲ್ಲಿ ಪ್ರಯಾಣಿಕರ ಸ್ಥಿತಿಯನ್ನು ಟೀಕಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!