ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೂಲಸೌಕರ್ಯ ಸುಧಾರಿಸಲು ಮತ್ತು ಪ್ರಪಂಚದಾದ್ಯಂತ ಹೂಡಿಕೆಗಳನ್ನು ಆಕರ್ಷಿಸಲು ಹೆಚ್ಚಿನ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಜನರು ಸರ್ಕಾರವನ್ನು ಟೀಕಿಸಬಾರದು, ಬದಲಿಗೆ ತಾಳ್ಮೆಯಿಂದಿದ್ದು ಅಭಿವೃದ್ಧಿಯಲ್ಲಿ ಸಹಕರಿಸಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಎರಡನೇ ಏರ್ ಪೋರ್ಟ್ ಯಾವ ಸ್ಥಳದಲ್ಲಿ ನಿರ್ಮಾಣವಾಗುತ್ತೆ ಎಂಬ ಬಗ್ಗೆ ಡಿಸಿಎಂ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಎರಡನೇ ಏರ್ ಪೋರ್ಟ್ ಅನ್ನು ದಕ್ಷಿಣ ಭಾಗದ ಕನಕಪುರ ರಸ್ತೆಯ ಬಳಿ ನಿರ್ಮಿಸಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ ನಲ್ಲಿ ಭಾಗವಹಿಸಿ ಮಾತನಾಡುವಾಗ ಡಿಸಿಎಂ ಡಿ.ಕೆ.ಶಿವಕುಮಾರ್ , ಬೆಂಗಳೂರಿನ ದಕ್ಷಿಣ ಭಾಗದಲ್ಲಿ 2ನೇ ಏರ್ ಪೋರ್ಟ್ ನಿರ್ಮಿಸಲಾಗುತ್ತೆ ಎಂದಿದ್ದಾರೆ.
ನಿಮ್ಮ ಸಮಸ್ಯೆ ನಮಗೆ ತಿಳಿದಿದೆ ಮತ್ತು ನಾವು ಅದರ ಸಂಬಂಧ ಕೆಲಸ ಮಾಡುತ್ತಿದ್ದೇವೆ. ಡಬಲ್ ಡೆಕ್ಕರ್ ಫ್ಲೈಓವರ್‌ಗಳು, ಅವಳಿ ಸುರಂಗ ರಸ್ತೆಗಳು ಮತ್ತು 132 ಕಿ.ಮೀ. ವ್ಯಾಪ್ತಿಯ ಇತರ ಯೋಜನೆಗಳೊಂದಿಗೆ ನಗರದ ಮೂಲಸೌಕರ್ಯವನ್ನು ಸುಧಾರಿಸಲು 1.5 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುತ್ತಿದೆ. ನಮ್ಮ ಮೇಲೆ ವಿಶ್ವಾಸವಿಡಿ ಎಂದಿದ್ದಾರೆ.

