ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕರು ಮತ್ತೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಎಚ್ಚರಿಕೆ ನೀಡಿದ್ದಾರೆ.
ಮುಂದಿನ 24ರಿಂದ 36 ಗಂಟೆಯೊಳಗೆ ಭಯೋತ್ಪಾದಕರಿ ದಾಳಿ ನಡೆಯುವ ಸಾಧ್ಯತೆ ಇದೆ. ಉಗ್ರರ ಮೇಲೆ ಅಮೆರಿಕ ನಡೆಸಿದ ಡ್ರೋನ್ ಸ್ಟ್ರೈಕ್ ಬಳಿಕ ಈ ಹೇಳಿಕೆ ನೀಡಿದ್ದಾರೆ. ಅಮೆರಿಕ ಯೋಧರು ಹಾಗೂ ಇಟಲಿ ವಿಮಾನಗಳನ್ನು ಗುರಿಯಾಗಿಸಿಕೊಂಡು ಐಸಿಸ್-ಕೆ ಉಗ್ರರು ಇತ್ತೀಚೆಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಅಮೆರಿಕ ಸೇನೆಯ 13 ಮಂದಿ ಮೃತಪಟ್ಟಿದ್ದರು. ಈ ವೇಳೆ ಪ್ರತೀಕಾರ ತೀರಿಸಿಕೊಂಡ ಅಮೆರಿಕ ಅಧ್ಯಕ್ಷ ಜೋ ಬಿಡನ್ ಡ್ರೋನ್ ದಾಳಿ ನಡೆಸಿ ಐಸಿಸ್ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.