August 31, 2026
Monday, August 31, 2026
spot_img

ಟೆಸ್ಟ್‌ಡ್ರೈವ್‌ ವೇಳೆ ನಿಯಂತ್ರಣ ತಪ್ಪಿ ಕರೆಂಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಹೊಸ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟೆಸ್ಟ್‌ ಡ್ರೈವ್‌ ವೇಳೆ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪು ಫುಟ್‌ಪಾತ್‌ ಮೇಲಿದ್ದ ಎಲೆಕ್ಟ್ರಿಕ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಬೆಂಗಳೂರಿನ ಕೆ.ಆರ್‌. ಪುರಂನಲ್ಲಿ ನಡೆದಿದೆ.

ಸಿಂಗಯ್ಯನಪಾಳ್ಯ ಬಸ್ ನಿಲ್ದಾಣದ ಬಳಿ ಇರುವ ಎಲೆಕ್ಟ್ರಿಕ್‌ ಕಂಬಕ್ಕೆ ಟೆಸ್ಟ್‌ ಡ್ರೈವ್‌ಗಾಗಿ ಬಂದಿದ್ದ ಸ್ವಿಫ್ಟ್‌ ಡಿಸೈರ್‌ ಕಾರು ಡಿಕ್ಕಿಯಾಗಿದೆ.

ನಿಯಂತ್ರಣ ತಪ್ಪಿದ ಕಾರು ಫುಟ್‌ಪಾತ್ ಮೇಲೆ ಹತ್ತಿ ಅಲ್ಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಮಹಿಳೆ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೆ.ಆರ್.ಪುರಂ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ವಿರುದ್ಧ ನಿರ್ಲಕ್ಷ್ಯ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !