spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚೀಯರ್ ಫಾರ್ ಇಂಡಿಯಾ ‘ಸೈಕಲ್ ರ‍್ಯಾಲಿ’ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಚೀಯರ್ ಫಾರ್ ಇಂಡಿಯಾ ಧ್ಯೇಯ ವಾಕ್ಯದಡಿ ‘ಸೈಕಲ್ ರ‍್ಯಾಲಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬೆಂಗಳೂರು ವಿಧಾನ ಸೌಧದ ಮುಂಭಾಗದಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಒಲಿಂಪಿಕ್ ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಹಿನ್ನೆಲೆ ಸೈಕಲ್ ರ‍್ಯಾಲಿ ಆಯೋಜಿಸಿತ್ತು.

ಬಸವರಾಜ್ ಬೊಮ್ಮಾಯಿ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ್ದು,  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿಯೊಂದು ವಿಷಯ, ಅಂಶಕ್ಕೂ ಸೂಕ್ಷ್ಮವಾಗಿ ಸ್ಪಂದಿಸುತ್ತಾರೆ. ಭಾರತ ಹಾಗೂ ಭಾರತೀಯತೆಗೆ ಸದಾ ತುಡಿತ, ಮಿಡಿಯುತ್ತಿದ್ದು, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಫೂರ್ತಿ ತುಂಬುತ್ತಿದ್ದಾರೆ ಎಂದರು.

ಯುವ ಜನತೆ ದೇಶದ ಶಕ್ತಿ ಹಾಗೂ ಭವಿಷ್ಯವಾಗಿದ್ದು, ನಾನು ಸಿಎಂ ಆದ ಬಳಿಕ ಮೊದಲ ಸಲ ಯುವ ಸಮೂಹ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು. ನನ್ನ ಮುಂದಿನ ಕಾರ್ಯಕ್ರಮಗಳಲ್ಲಿ ಯುವ ಜನತೆಗೆ ಪ್ರಾಶಸ್ತ್ಯ ಸಿಗಲಿದೆ. ಸೈಕಲ್ ನಿಂದ ನಮ್ಮ ದೇಹ ಸದೃಢವಾಗುತ್ತದೆ ಎಂದರು.

ಇನ್ನು ಈ ಸೈಕಲ್ ರ‍್ಯಾಲಿಯಲ್ಲಿ 300ಕ್ಕೂ ಹೆಚ್ಚು ಯುವಕರು ಬಭಾಗಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಮಾಜ ಸಚಿವ ಸುಧಾಕರ್ ಭಾಗವಹಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss