Sunday, July 3, 2022

Latest Posts

ಅಧಿಕಾರ ಸ್ವೀಕರಿಸಿದ ನೂತನ ಮುಖ್ಯಮಂತ್ರಿ: ಬೊಮ್ಮಾಯಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸ ದಿಗಂತ ವರದಿ, ಮಂಡ್ಯ:

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ತಾಲೂಕಿನ ತೂಬಿನಕೆರೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಸಂಭ್ರಮಾಚರಣೆ ನಡೆಸಿದರು. ತೂಬಿನಕೆರೆ ಮುಖ್ಯರಸ್ತೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಂತರ ಮಾತನಾಡಿದ ತೂಬಿನಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಬಿ.ಅಶೋಕ್ ಗೌಡ ಪಟೇಲ್ ಅವರು ತೂಬಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಕೆರೆಗಳಿಗೆ ಬಸವರಾಜ ಬೊಮ್ಮಾಯಿ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ 23 ಕೋಟಿ ಅಂದಾಜು ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದರು ಎಂದು ತಿಳಿಸಿದರು.
ಈ ಭಾಗದಲ್ಲಿ 600ರಿಂದ 700 ಅಡಿ ಬೋರ್‌ವೆಲ್ ಕೊರೆಸಿದರು ನೀರು ಬರುತ್ತಿರಲಿಲ್ಲ. ಏತನೀರಾವರಿ ಮೂಲಕ ಕೆರೆಗಳನ್ನು ತುಂಬಿಸುವು ದರಿಂದ ರೈತರು ಈ ಭಾಗದಲ್ಲಿ ಜೀವನ ಕಂಡುಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪದಗ್ರಹಣ ಸ್ವೀಕರಿಸದ ಹಿನ್ನೆಲೆಯಲ್ಲಿ ತೂಬಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆದು ಪಂಚಾಯಿತಿ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 275 ರ ಪಕ್ಕದಲ್ಲೇ ಬರುವ ರಸ್ತೆಗೆ ಬಸವರಾಜ ಬೊಮ್ಮಾಯಿ ಸರ್ಕಲ್ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss