ಮೇ 18ರಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭ ಮೇ 18ರಂದು ಗುರುವಾರ ನಡೆಯಲಿದ್ದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಬಹುಮತದ ಜಯ ಸಾಧಿಸಿದ ಬಳಿಕ, ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್‌ (DK Shivakumar) ಸಿಎಂಗಾದಿ ರೇಸ್‌ನಲ್ಲಿದ್ದಾರೆ. ಇಂದು ಸಿಎಲ್‌ಪಿ ಸಭೆ ನಡೆಯಲಿದೆ. ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಇಂದು ಸಿಎಲ್‌ಪಿ ಸಭೆ ನಡೆಯಲಿದೆ. ವರದಿಯನ್ನು ಹೈಕಮಾಂಡ್‌ಗೆ ಹಸ್ತಾಂತರಿಸಲಿದ್ದು, ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಗಾಂಧಿ ಕುಟುಂಬ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ ಎನ್ನಲಾಗುತ್ತಿದೆ.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!