ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭವು ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ, ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಇತ್ತ ದೇವೇಂದ್ರ ಫಡ್ನವೀಸ್ ಅವರನ್ನ ಶಾಸಕಾಂಗ ಪಕ್ಷದ ಗುಂಪಿನ ನಾಯಕರಾಗಿ ಬಿಜೆಪಿ ಇನ್ನೂ ಔಪಚಾರಿಕವಾಗಿ ಆಯ್ಕೆ ಮಾಡಿಲ್ಲವಾದರೂ, ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.