48 ಗಂಟೆಯೊಳಗೆ ನೂತನ ಸಿಎಂ ಹೆಸರು ಘೋಷಣೆ: ರಣದೀಪ್ ಸುರ್ಜೇವಾಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದ ನೂತನ ಮುಖ್ಯಮಂತ್ರಿಯ ಹೆಸರನ್ನು 48 ಗಂಟೆಯೊಳಗೆ ಆಯ್ಕೆ ಮಾಡಿ ಘೋಷಿಸಲಾಗುವುದು ಮತ್ತು 72 ಗಂಟೆಯೊಳಗೆ ಹೊಸ ಸಂಪುಟ ರಚನೆಯಾಗಲಿದೆ. ಇದರ ಜೊತೆಗೆ ಕಾಂಗ್ರೆಸ್ ನೀಡಿದ ಎಲ್ಲಾ ಗ್ಯಾರೆಂಟಿಗಳು ಅನುಷ್ಠಾನಕ್ಕೆ ಬರಲಿವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಬುಧವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲಾ, ವದಂತಿಗಳಿಗೆ ಯಾರೂ ಕಿವಿ ಕೊಡಬೇಡಿ ಕರ್ನಾಟಕದಲ್ಲಿ ಮುಂದಿನ ಐದು ವರ್ಷ ಸ್ಥಿರ ಸರಕಾರ ರಚಿಸುತ್ತೇವೆ. ಜನರ ಆಶೋತ್ತರಗಳನ್ನು ಈಡೇರಿಸಿ ಬದಲಾವಣೆ ತರಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಘೋಷಿಸಲಿದ್ದಾರೆ. ನಾವು ಅವಿರೋಧವಾಗಿ ನಾಯಕನ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸೋಲಿನ ಹತಾಶೆಯಿಂದ ಬಿಜೆಪಿಯವರು, ಕೆಲ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಆದರೆ ಜನತೆ ಯಾವುದನ್ನೂ ನಂಬಬಾರದು ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!