ಹಲವು ಸವಾಲುಗಳಿವೆ: ಖರ್ಗೆ ಅವರಿಗೆ ನಮ್ಮ ಬೆಂಬಲ ಸದಾ ಇರುತ್ತದೆ- ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖರ್ಗೆ ಅವರ ಮುಂದೆ ಹಲವು ಸವಾಲುಗಳಿವೆ, ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಖರ್ಗೆ ಅವರು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪಕ್ಷವನ್ನು ಮುನ್ನಡೆಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಬಹಳ ಅನುಭವಿ ನಾಯಕ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖರ್ಗೆ ಅವರಿಗೆ ಶುಭ ಹಾರೈಸುತ್ತೇನೆ ಎಂದರು. ಹೊಸ ನಾಯಕತ್ವದಲ್ಲಿ ಪಕ್ಷ ಮತ್ತಷ್ಟು ಮುನ್ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು, ಪಿಸಿಸಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು, ಮಾಜಿ ಸಿಎಂಗಳು, ಮಾಜಿ ಪಿಸಿಸಿ ಅಧ್ಯಕ್ಷರು ಹಾಗೂ ಎಐಸಿಸಿ ಪದಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!