ದೇಶದಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಕೋವಿಡ್‌ ಕೇಸ್‌ ಗಳು ಪತ್ತೆ: ಸಕ್ರಿಯ ಸೋಂಕಿತರೆಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಲಲ್ಲಿ 44,877 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,26,31,421ಕ್ಕೆ ಏರಿಕೆಯಾಗಿದ್ದು, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,05,550ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 5,37,045ಕ್ಕೆ ತಲುಪಿದೆ.
ನಿನ್ನೆ ಒಂದೇ ದಿನ 1,17,591 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,15,85,711ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!