September 28, 2026
Monday, September 28, 2026
spot_img

ಅಯೋಧ್ಯೆ ಟ್ರಸ್ಟ್‌ನಲ್ಲಿ ಹೊಸ ಬೆಳವಣಿಗೆ: ‘ಕಳಂಕಿತನಾಗಿ ಮುಂದುವರಿಯೋದಿಲ್ಲ’ ಎಂದ ಚಂಪತ್ ರಾಯ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಟ್ರಸ್ಟ್‌ನ ಹಿರಿಯ ಪದಾಧಿಕಾರಿ ಚಂಪತ್ ರಾಯ್ ತಮ್ಮ ಜವಾಬ್ದಾರಿಯನ್ನು ಮುಂದುವರಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ದೇಣಿಗೆ ನಿರ್ವಹಣೆಗೆ ಸಂಬಂಧಿಸಿದ ವಿವಾದದ ನಡುವೆ ಈ ಬೆಳವಣಿಗೆ ನಡೆದಿದ್ದು, ಜುಲೈ 6ರಂದು ನಡೆಯಲಿರುವ ಟ್ರಸ್ಟ್ ಸಭೆಯತ್ತ ಎಲ್ಲರ ಗಮನ ಹರಿದಿದೆ.

ಸೇವೆ ಪೂರ್ಣಗೊಂಡಿದೆ ಎಂದ ಚಂಪತ್ ರಾಯ್

ಮೂಲಗಳ ಪ್ರಕಾರ, ಚಂಪತ್ ರಾಯ್ ತಮ್ಮ ಆಪ್ತರ ಬಳಿ ಅಯೋಧ್ಯೆಯಲ್ಲಿ ತಮ್ಮ ಸೇವೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ. ವಿವಾದದ ನಡುವೆ ಯಾವುದೇ ಕಳಂಕದೊಂದಿಗೆ ಮುಂದುವರಿಯಲು ಬಯಸುವುದಿಲ್ಲ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ತಮ್ಮ ವಿಶ್ವಾಸಕ್ಕೆ ದ್ರೋಹವಾಗಿದೆ ಎಂಬ ಬೇಸರವನ್ನೂ ಅವರು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಸಭೆಯಲ್ಲಿ ಮಹತ್ವದ ನಿರ್ಧಾರದ ಸಾಧ್ಯತೆ

ಜುಲೈ 6ರಂದು ನಡೆಯಲಿರುವ ಟ್ರಸ್ಟ್ ಸಭೆಯಲ್ಲಿ ಚಂಪತ್ ರಾಯ್ ಹಾಗೂ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಅವರ ಭವಿಷ್ಯದ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡದ ವರದಿಯ ಬಳಿಕ ಟ್ರಸ್ಟ್ ಆಡಳಿತಕ್ಕೆ ಸಂಬಂಧಿಸಿದ ಹಲವು ವಿಷಯಗಳೂ ಸಭೆಯಲ್ಲಿ ಪ್ರಸ್ತಾಪವಾಗಲಿವೆ.

ದೇಣಿಗೆ ವಿವಾದದ ತನಿಖೆ ಮುಂದುವರಿಕೆ

ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತ ಆರೋಪಗಳ ಹಿನ್ನೆಲೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ತನಿಖೆಯ ಭಾಗವಾಗಿ ಹಲವು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಸಿದ್ಧ ಎಂಬ ಹೇಳಿಕೆಯನ್ನು ಚಂಪತ್ ರಾಯ್ ತನಿಖಾಧಿಕಾರಿಗಳ ಮುಂದೆ ದಾಖಲಿಸಿರುವುದಾಗಿ ವರದಿಯಾಗಿದೆ.

Must Read