ಹೊಸದಿಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜನವರಿ 6ರವರೆಗೆ ದಕ್ಷಿಣ ಕೇರಳದಲ್ಲಿ ಸಾಧಾರಣದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗಿರುವ ಬೆಳವಣಿಗೆ ಕಂಡುಬಂದಿದೆ. ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ವಾಯುಭಾರ ಕುಸಿತ ದಕ್ಷಿಣ ಅರಬ್ಬಿ ಸಮುದ್ರದ ಮಧ್ಯ ಭಾಗಕ್ಕೆ ತಲುಪಿ ಮತ್ತಷ್ಟು ಪ್ರಬಲಗೊಳ್ಳುವ ಸ್ಥಿತಿ ಕಂಡುಬಂದಿದೆ. ಎಮದಿರುವ ಹವಾಮಾನ ಇಲಾಖೆ, ಇದರಿಂದಾಗಿ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ಅಡಚಣೆ ಇಲ್ಲ ಎಂದು ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ