Thursday, December 18, 2025

ಭಾರತ-ಇಥಿಯೋಪಿಯಾ ಸ್ನೇಹದ ಹೊಸ ಪರ್ವ: ಪ್ರಧಾನಿ ಮೋದಿಗೆ ‘ದಿ ಗ್ರೇಟ್ ಆನರ್ ನಿಶಾನ್’ ಪ್ರಶಸ್ತಿ ಗರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಮೂರು ರಾಷ್ಟ್ರಗಳ ವಿದೇಶಿ ಪ್ರವಾಸವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರು ಪ್ರಧಾನಿ ಮೋದಿ ಅವರಿಗೆ ತಮ್ಮ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ಗೌರವಿಸಿದ್ದಾರೆ.

ಅಡಿಸ್ ಅಬಾಬಾದ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಭಾರತ ಮತ್ತು ಇಥಿಯೋಪಿಯಾ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಮೋದಿಯವರ ಶ್ರಮ ಹಾಗೂ ಜಾಗತಿಕ ವೇದಿಕೆಯಲ್ಲಿ ಅವರ ದೂರದೃಷ್ಟಿಯ ನಾಯಕತ್ವವನ್ನು ಗುರುತಿಸಿ ಈ ಗೌರವ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದು ಉಭಯ ದೇಶಗಳ ರಾಜತಾಂತ್ರಿಕ ಸಂಬಂಧದಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿ ಗುರುತಿಸಿಕೊಂಡಿದೆ.

error: Content is protected !!