Tuesday, November 4, 2025

ಉಡುಪಿಯ ಜನತೆಯಲ್ಲಿ ಹೊಸ ಸಂಚಲನ: ನಿಗದಿಯಾಯಿತು ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿಯ ದಿನಾಂಕ!


ಹೊಸದಿಗಂತ ಡಿಜಿಟಲ್ ಡೆಸ್ಕ್:


ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.


ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ.


ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ ಪತ್ರ ರವಾನಿಸಿದ್ದರು. ಈ ಸಂದರ್ಭ ಪುತ್ತಿಗೆ ಶ್ರೀಗಳು ತಮ್ಮ ಪರ್ಯಾಯ ಅವಽಯಲ್ಲಿ ಕೃಷ್ಣ ಮಠಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದರು.


ಈ ಹಿಂದೆ ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

error: Content is protected !!