October 13, 2026
Tuesday, October 13, 2026
spot_img

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಪ್ರಕಟ: ಇನ್ಮುಂದೆ ಪತಿಯ ಆಧಾರ್ ಲಿಂಕ್ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸರ್ಕಾರ ಈಗ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇನ್ಮುಂದೆ ಪ್ರತಿ ತಿಂಗಳು 2,000 ರೂಪಾಯಿ ಪಡೆಯಲು ಮಹಿಳೆಯರ ಆಧಾರ್ ಮಾತ್ರವಲ್ಲದೆ, ಅವರ ಪತಿಯ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಫಲಾನುಭವಿಗಳ ಮನೆ ಬಾಗಿಲಿಗೆ ಬರಲಿದ್ದಾರೆ ಗಣತೀದಾರರು

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ ಅಥವಾ ಗಣತೀದಾರರನ್ನು ನಿಯೋಜಿಸಲಿದೆ. ಈ ಅಧಿಕಾರಿಗಳು ನೇರವಾಗಿ ಫಲಾನುಭವಿಗಳ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಕೇವಲ ದಾಖಲೆಗಳ ಪರಿಶೀಲನೆ ಮಾತ್ರವಲ್ಲದೆ, ಮಹಿಳೆಯರ ಮುಖದ ಗುರುತು ಹಿಡಿಯುವ ‘ಫೇಶಿಯಲ್ ದೃಢೀಕರಣ’ ಹಾಗೂ ಜಿಪಿಎಸ್ ಆಧಾರಿತ ಮನೆ ಫೋಟೋವನ್ನು ಕೂಡ ಸ್ಥಳದಲ್ಲೇ ಅಪ್‌ಲೋಡ್ ಮಾಡಿಕೊಳ್ಳಲಿದ್ದಾರೆ.

ಪತಿಯ ಆಧಾರ್ ಕಡ್ಡಾಯ

ಹೊಸ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸಿದ ಮಹಿಳೆಯ ಆಧಾರ್ ಕಾರ್ಡ್ ಮಾತ್ರವಲ್ಲದೆ ಆಕೆಯ ಪತಿಯ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ, ಮಹಿಳೆಯರು ನೀಡುವ ಬ್ಯಾಂಕ್ ಖಾತೆಗೆ ಯಾವುದೇ ರೀತಿಯ ಸಾಲದ ಲಿಂಕ್ ಇರಬಾರದು. ಒಂದು ವೇಳೆ ಸಾಲ ಇರುವ ಖಾತೆಯನ್ನು ನೀಡಿದ್ದರೆ ಅಥವಾ ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸದಲ್ಲಿ ಸಣ್ಣ ವ್ಯತ್ಯಾಸವಿದ್ದರೂ ಸಹ ಪ್ರತಿ ತಿಂಗಳು ಬರುವ 2000 ರೂಪಾಯಿ ನಗದು ವರ್ಗಾವಣೆ ತಕ್ಷಣವೇ ಸ್ಥಗಿತಗೊಳ್ಳಲಿದೆ.

ಇದನ್ನೂ ಓದಿ:

ಪ್ರಕ್ರಿಯೆ ಯಾವಾಗ ಆರಂಭ?

ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡ ತಕ್ಷಣವೇ ಈ ಮರುಪರಿಶೀಲನಾ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈಗಾಗಲೇ ಈ 17 ಪ್ರಶ್ನೆಗಳ ಹೊಸ ಫಾರ್ಮ್ಯಾಟ್‌ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಅಂತಿಮ ಒಪ್ಪಿಗೆ ಸಿಗಬೇಕಾಗಿದ್ದು, ಸಿಎಂ ಹಸಿರು ನಿಶಾನೆ ನೀಡಿದ ತಕ್ಷಣವೇ ಅಧಿಕಾರಿಗಳು ಕಣಕ್ಕಿಳಿಯಲಿದ್ದಾರೆ. ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರನ್ನು ಯೋಜನೆಯಿಂದ ಹೊರಗಿಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Must Read