ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸರ್ಕಾರಿ ನೌಕರರು ತಮ್ಮನ್ನು ನಿರ್ದಿಷ್ಟ ಸ್ಥಳಕ್ಕೆ ವರ್ಗಾಯಿಸುವಂತೆ ಒತ್ತಾಯಿಸುವಂತಿಲ್ಲ ಹಾಗು ಸರ್ಕಾರದ ಅಗತ್ಯತೆಯನ್ನು ಆಧರಿಸಿ ಸಿಬ್ಬಂದಿಯನ್ನು ವರ್ಗಾಯಿಸಬೇಕೆಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಉತ್ತರ ಪ್ರದೇಶದ ಉಪನ್ಯಾಸಕಿಯೊಬ್ಬರು ತಮ್ಮನ್ನು ಅಮ್ರೋಹಾ ಜಿಲ್ಲೆಯಿಂದ ಗೌತಮ್ ಬುದ್ಧ ನಗರದ ಕಾಲೇಜಿಗೆ ವರ್ಗಾಯಿಸುವಂತೆ ಕೋರಿ ಶಿಕ್ಷಣ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರು. ಆದರೆ 2017 ರ ಸೆಪ್ಟೆಂಬರ್ನಲ್ಲಿ ಇವರ ಮನವಿಯನ್ನು ಪ್ರಾಧಿಕಾರ ತಿರಸ್ಕರಿಸಿತ್ತು. 2017ರ ಅಕ್ಟೋಬರ್ನಲ್ಲಿ ಇವರು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿಯೂ ಇವರ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ನೀಡಿತ್ತು.
ಹೀಗಾಗಿ, ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉಪನ್ಯಾಸಕಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಇವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾ. ಎಂಆರ್ ಷಾ ಮತ್ತು ನ್ಯಾ. ಅನಿರುದ್ಧ ಬೋಸ್ ನೇತೃತ್ವದ ನ್ಯಾಯಪೀಠ, ಸರ್ಕಾರಿ ನೌಕರರು ತಮ್ಮನ್ನು ನಿರ್ದಿಷ್ಟ ಸ್ಥಳಕ್ಕೆ ವರ್ಗಾಯಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಈ ಅಧಿಕಾರ ಆಯಾ ಸರ್ಕಾರಗಳಿಗೆ ಮಾತ್ರ ಇರುತ್ತದೆ. ಅಗತ್ಯವನ್ನು ಪರಿಗಣಿಸಿ ನೌಕರರನ್ನು ಸರ್ಕಾರ ವರ್ಗಾವಣೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದೆ.