ನೂತನ ಐಸಿಸಿ ಏಕದಿನ ಬ್ಯಾಟಿಂಗ್​ Rank: ಜಿಗಿತ ಕಂಡ ಕೊಹ್ಲಿ, ರೋಹಿತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೂತನ ಐಸಿಸಿ ಏಕದಿನ ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮಾ ಪ್ರಗತಿ ಕಂಡಿದ್ದಾರೆ.

ಐಸಿಸಿ ಬುಧವಾರ ಪ್ರಕಟಿಸಿದ ಶ್ರೇಯಾಂಕದಲ್ಲಿ ವಿರಾಟ್​ ಕೊಹ್ಲಿ ಎರಡು ಸ್ಥಾನ ಏರಿಕೆ ಕಾಣುವ ಮೂಲಕ 6ನೇ ಸ್ಥಾನಕ್ಕೆ ತಲುಪಿದ್ದಾರೆ. ನಾಯಕ ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಅವರು 20 ಸ್ಥಾನಗಳ ಪ್ರಗತಿ ಕಂಡು 61 ಸ್ಥಾನಕ್ಕೆ ತಲುಪಿದ್ದಾರೆ.

ಪಾಕಿಸ್ತಾನ ಕ್ರಿಕೆಟ್​ ತಂಡದ ನಾಯಕ ಬಾಬರ್​ ಅಜಂ ನಂ.1 ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಉಳಿದಂತೆ ಬೌಲಿಂಗ್ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ನಾಲ್ಕು ಸ್ಥಾನಗಳ ಏರಿಕೆ ಕಂಡು ಸದ್ಯ 18ನೇ ಸ್ಥಾನಕ್ಕೆ ತಲುಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!