ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಎಲ್ಲದರಲ್ಲೂ ಚಂದ, ಟ್ರಾಫಿಕ್ ಒಂದನ್ನು ಬಿಟ್ಟು. ಈ ಮಾತನ್ನು ಪ್ರತಿ ಬೆಂಗಳೂರಿಗನೂ ಒಪ್ಪುತ್ತಾನೆ. ಬಹುದೊಡ್ಡ ಸಮಸ್ಯೆಯಾದ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ನಡೆಯುತ್ತಿದೆ.
ಐಟಿ-ಬಿಟಿ ಕಂಪನಿಗಳ ಜೊತೆ ಸಭೆ ಮಾಡುವುದಕ್ಕೆ ಸಂಚಾರಿ ವಿಭಾಗದ ಜಂಟಿ ಆಯುಕ್ತರು ನಿರ್ಧರಿಸಿದ್ದಾರೆ.
ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ನಿಯಮ ಜಾರಿ ಮಾಡುವುದಕ್ಕೆ ಚಿಂತನೆ ನಡೆದಿದೆ. ಬೆಂಗಳೂರು ಸಂಚಾರಿ ವಿಭಾಗದ ಜಂಟಿ ಆಯುಕ್ತರು, ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಹಾಗೂ ಜಿಬಿಎ ಮುಖ್ಯ ಆಯುಕ್ತರು ಸೇರಿ ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ನಿಯಮಗಳನ್ನು ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ.
ಔಟರ್ ರಿಂಗ್ ರೋಡ್‌ನಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಆಗುತ್ತಿರುವ ಜಾಗಗಳನ್ನು ಗುರುತು ಮಾಡಲಾಗಿದೆ. ಹೀಗಾಗಿ ಔಟರ್ ರಿಂಗ್ ರೋಡ್ ಸೇರಿ ನಗರದ ಒಳಗೆ ಟ್ರಾಫಿಕ್ ಸಮಸ್ಯೆ ನಿವಾರಿಸಲು ಮುಂದಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಐಟಿ-ಬಿಟಿ ಕಂಪನಿಗಳ ಜೊತೆ ಸಭೆ ನಡೆಸುವ ಸಾಧ್ಯತೆಯಿದೆ.



