ಹೊಸ ಆದಾಯ ತೆರಿಗೆ ನಿಯಮ ಜಾರಿ.. ತಪ್ಪು ಮಾಹಿತಿ ನೀಡಿದ್ರೆ ಕಠಿಣ ಶಿಕ್ಷೆ ಗ್ಯಾರಂಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡುವ ಅಥವಾ ಆದಾಯವನ್ನು ಮರೆಮಾಚುವ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ.

ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ. 200ರವರೆಗೆ ದಂಡ, ವಾರ್ಷಿಕ ಶೇ. 24ವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೇ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ.

ಒಂದು ವೇಳೆ ನಿಮ್ಮ ಲೆಕ್ಕ ಪರಿಶೋಧಕರು ಅಥವಾ ತೆರಿಗೆ ಸಲಹೆಗಾರರು ತಪ್ಪು ಮಾಡಿದರೂ, ಕಾನೂನಿನ ಪ್ರಕಾರ ತೆರಿಗೆದಾರರಾದ ನೀವೇ ಸಂಪೂರ್ಣ ಜವಾಬ್ದಾರರಾಗಿರುತ್ತೀರಿ ಎಂದು ಇಲಾಖೆ ಸ್ಪಷ್ಟಪಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!