March 14, 2026
Saturday, March 14, 2026
spot_img

ನವ ಭಾರತದ ಸಂಕಲ್ಪ: ಬಜೆಟ್ ಬೆನ್ನಲ್ಲೇ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಕೇಂದ್ರ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.

ತಮ್ಮ ಭಾಷಣದಲ್ಲಿ ಪ್ರಧಾನಿಯವರು ಈ ಬಜೆಟ್ ಅನ್ನು “ಅಭಿವೃದ್ಧಿ ಮತ್ತು ಆತ್ಮನಿರ್ವಿಶ್ವಾಸದ ಸಂಕೇತ” ಎಂದು ಬಣ್ಣಿಸಿದರು. ಬಜೆಟ್‌ನಲ್ಲಿ ಘೋಷಿಸಲಾದ ಹೊಸ ಯೋಜನೆಗಳು ಮಧ್ಯಮ ವರ್ಗದವರ ಸಬಲೀಕರಣಕ್ಕೆ ಮತ್ತು ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಮುಖವಾಗಿ ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಕ್ಕೆ ನೀಡಿರುವ ಆದ್ಯತೆಯನ್ನು ಮೋದಿ ಅವರು ಶ್ಲಾಘಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !