ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಆಸ್ಪತ್ರೆಗಳಲ್ಲಿ ನೂತನವಾಗಿ ಜನೌಷಧಿ ಕೇಂದ್ರ ಆರಂಭಿಸಲು ಅನುಮತಿ ನೀಡಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಸಿಗುವಾಗ ಜನೌಷಧಿ ಕೇಂದ್ರ ಯಾಕೆ ಬೇಕು?ಇದರಿಂದ ಆಸ್ಪತ್ರೆಯ ಒಳಗಡೆ ವರ್ತುಲ ಸೃಷ್ಟಿಯಾಗುತ್ತದೆ. ಹಿಂದೆ ಯಾರು ಅನುಮತಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಹೊಸ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದರು.

ಇದರಿಂದ ಇದೀಗ ಕಡಿಮೆ ಬೆಲೆಯ ಜನೌಷಧಿ ಕೇಂದ್ರದ ವಿಚಾರದಲ್ಲಿ ರಾಜಕೀಯ ಆರಂಭವಾಯಿತೇ? ಮೋದಿ ವಿರೋಧಿಸೋ ಸಲುವಾಗಿಯೇ ಜನೌಷಧಿ ಕೇಂದ್ರಕ್ಕೆ ಸರ್ಕಾರ ಬ್ರೇಕ್‌ ಹಾಕಲು ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಮಾತ್ರೆ ಕೊಡುತ್ತೇವೆ. ಹೀಗಾಗಿ ಜನರು ದುಡ್ಡು ನೀಡಿ ಮಾತ್ರೆ ಖರೀದಿ ಮಾಡುವುದು ಯಾಕೆ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.

ಸರ್ಕಾರದಿಂದ ಔಷಧಿಗಳು, ಮಾತ್ರೆಗಳು ಉಚಿತ ಬರುತ್ತದೆ ಹೌದು. ಆದರೆ ಎಲ್ಲಾ ಮಾತ್ರೆಗಳು ಸಿಗುವುದಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬಳಿ ಜನೌಷಧಿ ಕೇಂದ್ರ ತೆರೆದರೆ ನಿಮಗೆ ಏನು ಕಷ್ಟ ಎಂದು ಜನರು ಈಗ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!