ವಕ್ಫ್ ಬೋರ್ಡ್ ಮೂಲಕ ರಾಜ್ಯದಲ್ಲಿ ಹೊಸ ರೀತಿಯ ಜಿಹಾದ್ ಆರಂಭ: ಪ್ರಲ್ಹಾದ್ ಜೋಶಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರಿಗೆ, ಮಠ, ಮಂದಿರಗಳಿಗೆ ಸೇರಿದ ಜಮೀನುಗಳ ಮಾಲೀಕತ್ವವನ್ನು ಕಬಳಿಸಲು ವಕ್ಫ್ ಬೋರ್ಡ್ ಮೂಲಕ ರಾಜ್ಯದಲ್ಲಿ ಹೊಸ ರೀತಿಯ ಜಿಹಾದ್ ಆರಂಭವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶುಕ್ರವಾರ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು, ಅಲ್ಪಸಂಖ್ಯಾತರ ಓಲೈಕೆಯೇ ತನ್ನ ಗುರಿಯನ್ನಾಗಿ ಮಾಡಿಕೊಂಡಿದೆ. ರಾಜ್ಯದಾದ್ಯಂತ ವಕ್ಫ್ ಮೂಲಕ ಹೊಸ ರೀತಿಯ ಜಿಹಾದ್ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯನವರ ನಡವಳಿಕೆಯನ್ನು ನೋಡಿದರೆ ಅವರು ಕಪಟಿಗಳು ಎಂದು ಜೋಶಿ ವಾಗ್ದಾಳಿ ನಡೆಸಿದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿ ರಕ್ಷಿಸುವುದಾಗಿ ಭರವಸೆ ನೀಡಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ.ಹೌದು. ಸಿಎಂ ಸಿದ್ದರಾಮಯ್ಯ ಹೇಳಿದಂತೆ ಬಿಜೆಪಿ ವಕ್ಫ್ ಆಸ್ತಿ ಸಂರಕ್ಷಣೆ ಮಾಡಲು ಬದ್ಧವಿದೆ. ನಾವು ಹೇಳಿರುವುದು ಅಸ್ತಿತ್ವದಲ್ಲಿರುವ ವಕ್ಫ್ ಆಸ್ತಿಗಳು ಮತ್ತು ಕಾಂಗ್ರೆಸ್ ಹಿರಿಯ ನಾಯಕರಿಂದ ಅತಿಕ್ರಮಣ ಮತ್ತು ಲೂಟಿ ಮಾಡಿದ ಆಸ್ತಿ ರಕ್ಷಣೆ. ಕಾಂಗ್ರೆಸ್ ಹಿರಿಯ ಮುಖಂಡ ಅನ್ವರ್ ಮಾನಪ್ಪಾಡಿ ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ಕಮರುಲ್ ಇಸ್ಲಾಂ, ರೆಹಮಾನ್ ಖಾನ್, ಎನ್.ಎ.ಹ್ಯಾರಿಸ್, ಜಾಫರ್ ಶರೀಫ್ ಅವರೇ ಲೂಟಿ ಮಾಡಿದ್ದಾರೆ. ಹಾಗಾಗಿ ನಾವು ವಕ್ಫ್ ಆಸ್ತಿಯನ್ನು ಸಂರಕ್ಷಿಸುತ್ತೇವೆ ಎಂದು ತಿಳಿಸಿದ್ದೇವೆ ಎಂದು ತಿರುಗೇಟು ನೀಡಿದರು.

ನಾವು ಆ ಜಮೀನುಗಳನ್ನು ರಕ್ಷಿಸುತ್ತೇವೆ ಎಂದು ಹೇಳಿದ್ದೆವು, ನೀವು(ಕಾಂಗ್ರೆಸ್ ಸರ್ಕಾರ) ಈಗ ಏನು ಮಾಡುತ್ತಿದ್ದೀರಿ? ಮಠಗಳು ಮತ್ತು ದೇವಸ್ಥಾನಗಳ ಭೂಮಿಯನ್ನು ವಕ್ಫ್‌ ಬೋರ್ಡ್ ಗೆ ಸೇರಿಸುತ್ತಿದ್ದೀರಿ. ನಾನು ಸಿದ್ದರಾಮಯ್ಯ ಅವರನ್ನು ಕೇಳುತ್ತೇನೆ, ನೀವು ಏನು ಮಾಡಲು ಪ್ರಯತ್ನಿಸುತ್ತಿದ್ದೀರಿ?ಇದೊಂದು ದೊಡ್ಡ ಷಡ್ಯಂತ್ರ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ, ದೇಶ ಮುಖ್ಯವಲ್ಲ, ಭಯೋತ್ಪಾದಕರ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!