ಹೊಸದಿಗಂತ ವರದಿ,ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಗುರುವಾರ 16 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು,ಪಾಸಿಟಿವಿಟಿ ಪ್ರಮಾಣ ಶೇ.2.59 ಕ್ಕೆ ಏರಿಕೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 2, ಸೋಮವಾರಪೇಟೆ ತಾಲೂಕಿನಲ್ಲಿ 4 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 10 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 47,651ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 39 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 47,120 ಮಂದಿ ಸೋಂಕು ಮುಕ್ತರಾದಂತಾಗಿದ್ದು, 451 ಮಂದಿ ಸಾವಿಗೀಡಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 80 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 28ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.