ಕೊಡಗು ಜಿಲ್ಲೆಯಲ್ಲಿ 20 ಮಂದಿಗೆ ಹೊಸ ಕೋವಿಡ್ ಪ್ರಕರಣ ದೃಢ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 20 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 4ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 8 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,320ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 8 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 45,899 ರಷ್ಟಾಗಿದೆ.ಅಲ್ಲದೆ ಇದುವರೆಗೆ 445 ಮಂದಿ ಸಾವಿಗೀಡಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 976 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 134 ಹಾಗೂ ಪಾಸಿಟಿವಿಟಿ ದರ ಶೇ.1.18ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!