ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆಯ ಕ್ಯಾಬಿನೆಟ್‌ನಲ್ಲಿ ಹೊಸ ಕಾನೂನು ತರಲಿದ್ದು, ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಎಂದು ಭರವಸೆ ನೀಡಿದ್ದಾರೆ.