ಸುಳ್ಳು ಸುದ್ದಿ, ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಜಾರಿ: ಸಚಿವ ಡಾ.ಜಿ.ಪರಮೇಶ್ವರ್

 ಹೊಸ ದಿಗಂತ ವರದಿ ಮಂಗಳೂರು:

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ನಡೆದ ಶಾಂತಿ ಸೌಹಾರ್ದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಅನಿವಾರ್ಯ. ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕಿದೆ ಎಂದರು.

ಕರಾವಳಿಯಲ್ಲಿ ಶಾಂತಿಯ ವಾತಾವರಣ ಬರಬೇಕು. ಭಯದ ವಾತಾವರಣ ದೂರವಾಗಬೇಕು. ಅಹಿತಕರ ಘಟನೆ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅನಿವಾರ್ಯತೆ ಬರಲೇ ಬಾರದು. ಈಗಾಗಲೇ ಪೊಲೀಸ್ ಅಕಾರಿಗಳು ಕೈಗೊಂಡ ಕ್ರಮದ ಬಗ್ಗೆ ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ. ಶಾಂತಿ ಕದಡುವ ಮೂಲಕ ಮತ್ತಷ್ಟು ಕಠಿಣ ಕ್ರಮಕ್ಕೆ ಅವಕಾಶ ನೀಡಬಾರದು. ಈ ಹಿಂದಿನಂತೆ ಕರಾವಳಿಯಲ್ಲಿ ಸೌಹಾರ್ದತೆ ಮರಳಬೇಕು ಎಂದು ಸಚಿವರು ಹೇಳಿದರು.

ಅಕ್ರಮ ಗೋ ಸಾಗಾಟ, ಗೋ ಹತ್ಯೆಗೆ ಸಂಬಂಧಿಸಿ ಈಗಾಗಲೇ ಇರುವ ಕಾನೂನನ್ನು ಅವಶ್ಯವಾದರೆ ಬಲಪಡಿಸಲಾಗುವುದು. ಕಾನೂನು ಪ್ರಕಾರ ಏನೇ ನಡೆದರೂ ನಾವು ಮಾತನಾಡುವುದಿಲ್ಲ. ಆದರೆ ಉಲ್ಲಂಘನೆ ಆದರೆ ಬಿಡುವುದಿಲ್ಲ. ಗೋ ಸಾಗಾಟದ ಹೆಸರಿನಲ್ಲಿ ಪೊಲೀಸ್‌ಗಿರಿ ಮಾಡಬಾರದು. ಅಕ್ರಮಗಳು ನಡೆಯುತ್ತಿದ್ದರೆ ಅದ್ನು ಪೊಲೀಸರಿಗೆ ತಿಳಿಸಿ. ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಗೃಹ ಸಚಿವರು ಸಲಹೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!