August 19, 2026
Wednesday, August 19, 2026
spot_img

ಪರೀಕ್ಷಾ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಕಾನೂನು: ಲೋಕಸಭೆಯಲ್ಲಿ ‘ಪ್ರಶ್ನೆ ಪತ್ರಿಕೆ ಸೋರಿಕೆ ತಡೆ’ ಮಸೂದೆಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದೆ. ವಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ಧ್ವನಿಮತದ ಮೂಲಕ ಮಸೂದೆಗೆ ಅನುಮೋದನೆ ದೊರೆತಿದ್ದು, ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ.

ಗದ್ದಲದ ನಡುವೆಯೇ ಮಸೂದೆಗೆ ಒಪ್ಪಿಗೆ

ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಲಾಠಿ ಚಾರ್ಜ್ ವಿಚಾರವಾಗಿ ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು. ಆದರೂ ಸದನದಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿತು. ಪ್ರಶ್ನೆ ಪತ್ರಿಕೆ ಸೋರಿಕೆ, ವಂಚನೆಯಲ್ಲಿ ಭಾಗಿಯಾಗುವ ತಪ್ಪಿತಸ್ಥರಿಗೆ ಕನಿಷ್ಠ 5 ವರ್ಷದಿಂದ ಗರಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 50ಲಕ್ಷ ರೂ. ವರೆಗೆ ಭಾರಿ ದಂಡ ವಿಧಿಸಲು ನೂತನ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:

ಪರೀಕ್ಷಾ ವ್ಯವಸ್ಥೆ ಬಲಪಡಿಸುವ ಉದ್ದೇಶ

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ತಿದ್ದುಪಡಿಗಳ ಮೂಲಕ ಪರೀಕ್ಷೆಗಳ ಸಮಗ್ರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಎಂದು ಹೇಳಿದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳುವ ಬದ್ಧತೆಯನ್ನೂ ಅವರು ಪುನರುಚ್ಚರಿಸಿದರು.

ಅಕ್ರಮಗಳಿಗೆ ಕಠಿಣ ಸಂದೇಶ

ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿ ಪಾತ್ರ ವಹಿಸುವ ನಿರೀಕ್ಷೆ ಇದೆ. ಭವಿಷ್ಯದಲ್ಲಿ ಸಾರ್ವಜನಿಕ ಪರೀಕ್ಷೆಗಳನ್ನು ಹೆಚ್ಚು ಸುರಕ್ಷಿತ ಹಾಗೂ ವಿಶ್ವಾಸಾರ್ಹವಾಗಿ ನಡೆಸಲು ಈ ಕ್ರಮ ನೆರವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !