October 5, 2026
Monday, October 5, 2026
spot_img

‘ವಂದೇ ಮಾತರಂ’ಗೆ ಹೊಸ ಕಾನೂನು ಕವಚ: ರಾಷ್ಟ್ರೀಯ ಗೀತೆಗೆ ಅವಮಾನ ಮಾಡಿದ್ರೆ ಮೂರು ವರ್ಷ ಜೈಲು ಗ್ಯಾರಂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ರಾಷ್ಟ್ರೀಯ ಗೌರವದ ರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ-2026ಯನ್ನು ರಾಜ್ಯಸಭೆ ಧ್ವನಿಮತದ ಮೂಲಕ ಅಂಗೀಕರಿಸಿದೆ. ವಿಪಕ್ಷಗಳ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ಸದನದಲ್ಲಿ ಮಸೂದೆಗೆ ಅನುಮೋದನೆ ದೊರಕಿದೆ.

ಗದ್ದಲದ ನಡುವೆಯೇ ಮಸೂದೆಗೆ ಒಪ್ಪಿಗೆ

ಮಸೂದೆ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿ ಘೋಷಣೆ ಕೂಗಿದವು. ಬಳಿಕ ಕೆಲವು ವಿಪಕ್ಷ ಸದಸ್ಯರು ಸದನದಿಂದ ಬಹಿರ್ಗಮನ ನಡೆಸಿದರು.

ಇದನ್ನೂ ಓದಿ:

‘ವಂದೇ ಮಾತರಂ’ಗೆ ವಿಶೇಷ ಕಾನೂನು ರಕ್ಷಣೆ

ಹೊಸ ತಿದ್ದುಪಡಿ ಮಸೂದೆಯ ಪ್ರಕಾರ,’ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನ ಗಣ ಮನ’ದಷ್ಟೇ ಕಾನೂನು ರಕ್ಷಣೆ ನೀಡಲಾಗುತ್ತದೆ. ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆ ಹಾಗೂ ರಾಷ್ಟ್ರೀಯ ಚಿಹ್ನೆಗಳಿಗೆ ಅವಮಾನ ಮಾಡಿದರೆ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಸರ್ಕಾರದ ಸ್ಪಷ್ಟನೆ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, ‘ವಂದೇ ಮಾತರಂ’ ದೇಶದ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದ್ದು, ಅದಕ್ಕೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ರಾಷ್ಟ್ರೀಯ ಏಕತೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ ಎಂದು ಅವರು ತಿಳಿಸಿದರು.

Must Read