ವಿಧಾನ ಪರಿಷತ್​ ಸದಸ್ಯರಾಗಿ ಶೆಟ್ಟರ್, ತಿಪ್ಪಣ್ಣಪ್ಪ, ಬೋಸರಾಜು ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಮತ್ತು ಬೋಸರಾಜು ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಭಗವಂತನ ಹೆಸರಿನಲ್ಲಿ ಜಗದೀಶ ಶೆಟ್ಟರ್, ಎನ್ ಎಸ್ ಭೋಸ್ ರಾಜ್ ಪ್ರಮಾಣ ವಚನ ಸ್ವೀಕರಿಸಿದರೆ, ಕುಲದೇವತೆ ಮಾತೆ ಮಾಣಿಕೇಶ್ವರಿ ತಾಯಿ ಹೆಸರಿನಲ್ಲಿ ತಿಪ್ಪಣ್ಣಪ್ಪ ಕಮಕನೂರ್ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ‌ ಪಾಟೀಲ್, ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್ ಪಾಲ್ಗೊಂಡಿದ್ದರು.

ವಿಧಾನಮಂಡಲ​​​ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡನೆ ಮಾಡಲಿದ್ದಾರೆ. ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯಗಳು ಚರ್ಚೆಯಾಗಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!