February 16, 2026
Monday, February 16, 2026
spot_img

ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮನ್ವಂತರ: ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಗೋಯಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಅಮೆರಿಕ ನಡುವೆ ಏರ್ಪಟ್ಟಿರುವ ಬೃಹತ್ ವ್ಯಾಪಾರ ಒಪ್ಪಂದವನ್ನು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಇಡೀ ದೇಶವೇ ಹೆಮ್ಮೆಪಡುವಂತಹ ಐತಿಹಾಸಿಕ ಒಪ್ಪಂದವಾಗಿದ್ದು, ಭಾರತದ ನೆರೆಹೊರೆಯ ರಾಷ್ಟ್ರಗಳೊಂದಿಗೆ ಅಮೆರಿಕ ಮಾಡಿಕೊಂಡಿರುವ ಯಾವುದೇ ಒಪ್ಪಂದಗಳಿಗಿಂತ ಇದು ಶ್ರೇಷ್ಠವಾಗಿದೆ,” ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ವೈಯಕ್ತಿಕ ಸ್ನೇಹವು ಈ ಮಹತ್ವದ ಒಪ್ಪಂದಕ್ಕೆ ಅಡಿಪಾಯ ಹಾಕಿದೆ ಎಂಬುದು ಗೋಯಲ್ ಅವರ ಅಭಿಪ್ರಾಯ. ದೇಶದ ಭವಿಷ್ಯ ಮತ್ತು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಲವಾದ ವ್ಯಾಪಾರ ಬಾಂಧವ್ಯಕ್ಕಾಗಿ ಇವತ್ತು ದೇಶದ ಪ್ರತಿಯೊಬ್ಬರೂ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:

ಈ ಒಪ್ಪಂದದ ಮೂಲಕ ಭಾರತವನ್ನು ಅಮೆರಿಕಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಅವರ ಟೀಕೆಯನ್ನು ಪೀಯೂಷ್ ಗೋಯಲ್ ಅವರು ತೀವ್ರವಾಗಿ ಖಂಡಿಸಿದರು. ರಾಷ್ಟ್ರೀಯ ಹಿತಾಸಕ್ತಿಯನ್ನು ಬಲಿಕೊಡುವ ಯಾವುದೇ ಪ್ರಶ್ನೆಯೇ ಇಲ್ಲ ಮತ್ತು ಇದು ದೇಶದ ಪ್ರಗತಿಯ ಪಥ ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !