ಗೋಟಬಯ ರಾಜಪಕ್ಸೆ ಅಧ್ಯಕ್ಷ ಸ್ಥಾನಕ್ಕೆ ಕುತ್ತು: ರಾಜೀನಾಮೆಗೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೆ ಅವರು ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಜನರು ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಪ್ರತಿಭಟನಾಕಾರರ ಆಗ್ರಹದಂತೆ ಮಹಿಂದಾ ರಾಜಪಕ್ಸೆಯವರನ್ನು ಪ್ರಧಾನಿ ಹುದೆಯಿಂದ ಕೆಳಗಿಳಿಸಿ ರಾನಿಲ್ ವಿಕ್ರಮ್ ಸಿಂಘೆ ಅವರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಿದರು.

ಈ ಸಂದರ್ಭದಲ್ಲಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ದೇಶದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಬೇಕು ಎಂದಿದ್ದಾರೆ. ಗೋಟಬಯ ರಾಜೀನಾಮೆ ನೀಡಬೇಕೆಂದು ಜನ  ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುತ್ತಿರುವುದಾಗಿ ವಿಕ್ರಮ್‌ ಸಿಂಘೆ ತಿಳಿಸಿದ್ದಾರೆ. ʻಗೋಟ ಗೋ ಹೋಮ್ʼ ಎಂದು ಪ್ರತಿಭಟನೆಗಳು ನಡೆಯುತ್ತಿವೆ. ದೇಶದ ರಾಜಕೀಯ ವ್ಯವಸ್ಥೆಯನ್ನು ಬದಲಾಯಿಸಲು ʻಗೋಟ ಗೋ ಹೋಮ್ʼ ಪ್ರತಿಭಟನೆಗಳು ಮುಂದುವರೆಯಬೇಕು ಮತ್ತು ದೇಶದ ಯುವಜನರು ಇದರ ಹೊಣೆ ಹೊರಬೇಕು ಎಂದು ನೂತನ ಪ್ರಧಾನಿ ರನಿಲ್ ವಿಕ್ರಮ್ ಸಿಂಘೆ ಕರೆ ನೀಡಿದ್ದಾರೆ.

ಗ್ರಾಮಗಳಲ್ಲಿ ಧರಣಿ ನಿರತ ಯುವಕರಿಗೆ ರಕ್ಷಣೆ ನೀಡುವುದಾಗಿ ತಿಳಿಸಿದರು. ಭವಿಷ್ಯದ ನೀತಿ ನಿರೂಪಣೆಗಾಗಿ ಅವರ ಅಭಿಪ್ರಾಯಗಳನ್ನು ತಿಳಿಯಲಾಗುವುದು ಎಂದು ರಾನಿಲ್ ವಿಕ್ರಮ್ ಸಿಂಗ್ ಹೇಳಿದ್ದಾರೆ. ನೂತನ ಪ್ರಧಾನಿ ಹೇಳಿಕೆಗೆ ಗೋಟಬಯ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!