ಹೊಸದಿಗಂತ ವರದಿ, ಅಂಕೋಲಾ:
ಪ್ರಧಾನಿ ನರೇಂದ್ರ ಮೋದಿಯವರು ಕಾರವಾರದ ಮಾಜಾಳಿರಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಬಂದರು ನಿರ್ಮಾಣಕ್ಕೆ ಅನುಮೋದನೆ ನೀಡಿರುವುದು ಕ್ಷೇತ್ರದ ಅಭಿವೃದ್ಧಿಯ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕಿ ರೂಪಾಲಿ ನಾಯ್ಕ ತಿಳಿಸಿದ್ದಾರೆ.
ಮಾಜಾಳಿಯಲ್ಲಿ ಬಂದರು ನಿರ್ಮಾಣ ಆಗಬೇಕು ಎನ್ನುವುದು ಜನರ ಬಹು ಕಾಲದ ಕನಸಾಗಿದ್ದು ಪ್ರಧಾನಿ ನರೇಂದ್ರ ಮೋದಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಂದರು ನಿರ್ಮಾಣಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ.
ಬಂದರು ನಿರ್ಮಾಣದಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ ಎಂದು ಶಾಸಕಿ ರೂಪಾಲಿ ಸಂತೋಷ ವ್ಯಕ್ತಪಡಿಸಿದ್ದು ಈ ದಿಶೆಯಲ್ಲಿ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಮೀನುಗಾರಿಕೆ ಸಚಿವ ಎಸ್. ಅಂಗಾರ, ಸಂಸದ ಅನಂತಕುಮಾರ ಹೆಗಡೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ